ಆನೇಕಲ್: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಡುರಸ್ತೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಇಡ್ಲಬೆಲೆ ರಸ್ತೆಯ ಚೌಡೇಶ್ವರಿ ಲೇಔಟ್ ನ ಬಳಿ ನಡೆದಿದೆ ...
ಇನ್ನು ನಡುರಸ್ತೆಯಲ್ಲೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಟ್ಟೆಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದ್ರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಬಗ್ಗೆ ಆರೋಪ ಕೇಳಿಬಂದಿದೆ..ಇನ್ನು ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಸ್ಥಳೀಯ ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದೆ.
PublicNext
15/06/2022 03:04 pm