ಬೆಂಗಳೂರು: ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ ವಿದ್ಯಾಶಿಲ್ಪ ಮೇಲ್ಸೇತುವೆ ಇಳಿಜಾರು ಬಳಿಯ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ನಿನ್ನೆ ಮಂಗಳವಾರ ಸಂಜೆ 6-30ಕ್ಕೆ ಸಂಭವಿಸಿದ ಅಪಘಾತದಲ್ಲಿ ಜಕ್ಕೂರಿನ ಆಟೋಚಾಲಕ 55ವರ್ಷದ ನಾಗರಾಜ್ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆಟೋ ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಗರಾಜ್ ತಲೆಗೆ ತೀವ್ರ ಗಾಯವಾಗಿತ್ತು. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಆಟೋದಲ್ಲಿ ಇಬ್ಬರು ಪ್ರಯಾಣಿಕರು ಬಚಾವಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ನಮ್ಮ ಸೀನಿಯರ್ ರಿಪೋರ್ಟರ್ ನಡೆಸಿರುವ Exclusive Walkthrough ಇಲ್ಲಿದೆ.
PublicNext
29/06/2022 09:11 am