ಬೆಂಗಳೂರು: ಇಂದು ಬೆಳಗಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದಾರೆ. ಇನ್ನೊಬ್ಬ ಸವಾರ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಜೆಪಿ ನಗರ ಮೂರನೇ ಹಂತದಲ್ಲಿ ಸೆಂಟ್ ಪಾಲ್ಸ್ ಸ್ಕೂಲ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಇನ್ನೋರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿ ವೇಗ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು. ಮೃತಪಟ್ಟ ವಾಹನ ಸವಾರ ಹೆಲ್ಮೆಟ್ ಧರಿಸ ದಿರುವುದೇ ಸಾವಿಗೆ ಕಾರಣವಾಯಿತು. ಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
Kshetra Samachara
17/07/2022 11:21 am