ಬೆಂಗಳೂರು: ಕಾರಿನ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಸಂದ್ರ ಸಿಗ್ನಲ್ ಬಳಿ ಸಂಭವಿಸಿದೆ.
ಬೆಂಗಳೂರು ಹೊಸೂರು ಮುಖ್ಯರಸ್ತೆಯಲ್ಲಿ ತಾಯಿ-ಮಗಳು ಹೊಸೂರು ಕಡೆಗೆ ಪ್ರಯಾಣ ಬೆಳೆಸಿದ್ದರು. ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ಸಿಗ್ನಲ್ ರೆಡ್ ಆಗಿದ್ದರೂ ಸಿಗ್ನಲ್ ಜಂಪ್ ಮಾಡಿದ್ದಾರೆ.
ಈ ವೇಳೆ ಹಿಂಬದಿಯಿಂದ ಲಾರಿ ಕೂಡ ಮುನ್ನುಗ್ಗಿದೆ. ಕಾರು ಸಡನ್ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದ್ದು, ಕಾರಿನ ಹಿಂಭಾಗದ ಗ್ಲಾಸ್ ಪುಡಿಯಾಗಿದೆ. ತಾಯಿ- ಮಗಳಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
PublicNext
17/07/2022 08:58 pm