ಆನೇಕಲ್ : ಅತಿ ವೇಗವಾಗಿ ಧಾವಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟು , ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲೂರು ಗೇಟ್ ಬಳಿ ಸಂಭವಿಸಿದೆ.
ಇನ್ನು, ಅಪಘಾತಕ್ಕೊಳಗಾದ ವ್ಯಕ್ತಿಗಳು ಕಾರ್ಯಕ್ರಮವೊಂದಕ್ಕೆ ಹೋಗಿದ್ದು, ಬಳಿಕ ಮರಳಿ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅತಿ ವೇಗದ ಜೊತೆಗೆ ತಡೆಗೋಡೆ ಇಲ್ಲ, ಕಿರಿದಾದ ರಸ್ತೆ ದುರ್ಘಟನೆಗೆ ಕಾರಣವಾಗಿದೆ.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತಕ್ಕೊಳಗಾದ ವ್ಯಕ್ತಿಗಳು ಯಾರು? ಯಾವ ಊರು ಎಂದು ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
17/07/2022 09:07 pm