ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗ್ಯಾಸ್ ಫಿಲ್ಲಿಂಗ್ ಮಾಡುವ ಸಮಯದಲ್ಲಿ ಸಿಲಿಂಡರ್ ಬ್ಲಾಸ್ಟ್ ಓರ್ವನಿಗೆ ಗಾಯ!

ವರದಿ- ಬಲರಾಮ್ ವಿ

ಬೆಂಗಳೂರು: ಗ್ಯಾಸ್ ಫಿಲ್ಲಿಂಗ್ ಮಾಡುವ ಸಮಯದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿರುವ ಘಟನೆ ಕೆ.ಆರ್.ಪುರದ ಹೆಚ್.ಎ.ಎಲ್ ವಾರ್ಡನ ಇಸ್ಲಾಂಪುರ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಖಾದೀರ್ ಎಂಬುವವರು ತೀವ್ರ ಗಾಯಗೊಂಡಿದ್ದು, ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪ್ಸರ್ ಎಂಬುವವರಿಗೆ ಸೇರಿದ ಈ ಫಿಲ್ಲಿಂಗ್ ಗ್ಯಾಸ್ ಸಿಲಿಂಡರ್ ಏಜೆನ್ಸಿಯು ಆಕಸ್ಮಿಕವಾಗಿ ಸ್ಪೋಟಗೊಂಡಿದ್ದರಿಂದ ಓರ್ವ ವ್ಯಕ್ತಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಅಪ್ಸರ್ ಎಂಬುವವರು ಈ ಹಿಂದೆಯೇ ಹೆಚ್.ಎ.ಎಲ್‌ನ ಗುರ್ಜೂರಿ ರಸ್ತೆಯಲ್ಲಿ ಅಂಗಡಿ ಹಾಕಿಕೊಂಡಿದ್ದ ಎನ್ನಲಾಗಿದೆ. ಪೊಲೀಸರು ಅಲ್ಲಿಂದ ತೆರವುಗೊಳಿಸಿದ್ದರು. ಜನವಸತಿ ಇರುವ ಗ್ಯಾಸ್ ಫಿಲ್ಲಿಂಗ್ ಹಾಕಿಕೊಂಡ ಅಪ್ಸರ್ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದರು.

ಇನ್ನೂ ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾದರು.

Edited By : Manjunath H D
PublicNext

PublicNext

21/07/2022 09:57 pm

Cinque Terre

41.17 K

Cinque Terre

1

ಸಂಬಂಧಿತ ಸುದ್ದಿ