ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹೊತ್ತಿ ಉರಿದ ಎಲೆಕ್ಟ್ರಿಕಲ್ ಬೈಕ್

ಆನೇಕಲ್: ಚಲಿಸುತ್ತಿದ್ದ ಎಲೆಕ್ಟ್ರಿಕಲ್ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣಮಾತ್ರದಲ್ಲೇ ಬೆಂಕಿ ವ್ಯಾಪಿಸಿ ಧಗಧಗ ಹೊತ್ತಿ ಉರಿದಿರುವ ಘಟನೆ ಕೃಷ್ಣಗಿರಿ ಜಿಲ್ಲೆ ಹೊಸೂರಿನ ತೊಟಗಿರಿ ಬಳಿ ನಡೆದಿದೆ.

ಸದಾಶಿವಂ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಇದಾಗಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿರುವ ವೇಳೆ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಹೊಗೆ

ಕಾಣಿಸಿಕೊಂಡಿದೆ. ತಕ್ಷಣವೇ ಬೈಕ್ ನಿಲ್ಲಿಸಿ ಮಕ್ಕಳನ್ನು ಕೆಳಗಿಳಿಸಿ ದೂರ ಸರಿಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಬೆಂಕಿಗಾಹುತಿಯಾಗಿದೆ. ಬಳಿಕ ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದಲ್ಲದೇ ಈ ಹಿಂದೆ ಕಾರ್ಪೊರೇಷನ್ ಬಸ್ತಿ ಪ್ರದೇಶದ ನಿವಾಸಿ ಪ್ರವೀಣ್ ಕುಮಾರ್ ಓಕೆನವಾ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದ ನಿತ್ಯ ಬಳಸುತ್ತಿದ್ದರಿಂದ ಅದೇ ಪ್ರದೇಶದ ಸದಾಶಿವಂ ಸಹ ಖರಿದೀಸಿದ್ದ ಘಟನೆಯಿಂದ ಎಲೆಕ್ಟ್ರಿಕ್ ಬೈಕ್‌ಗಳ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ.

Edited By : PublicNext Desk
Kshetra Samachara

Kshetra Samachara

27/07/2022 06:21 pm

Cinque Terre

2.27 K

Cinque Terre

0

ಸಂಬಂಧಿತ ಸುದ್ದಿ