ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 12ರ ಬಾಲಕ ದಾರುಣ ಸಾವು

ಬೆಂಗಳೂರು: ಎರಡನೇ ಮಹಡಿಯಿಂದ 12 ವರ್ಷದ ಬಾಲಕನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಕಾಳೇನ ಅಗ್ರಹಾರ ಸಮೀಪದ ಸಿವಿಕೆ ಮೀನಾಕ್ಷಿ ಎಲೆಗೆನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಅದಿತ್ ಸಾವನ್ನಪ್ಪಿದ ಬಾಲಕ. ಇನ್ನು ತಾಯಿ ಜೊತೆಯಲ್ಲಿ ವಾಸವಾಗಿದ್ದ ಅದಿತ್, ಸ್ಕೂಲ್ ಆಫ್ ಇಂಡಿಯಾ ಎಂಬ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಇನ್ನು ತಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಅದಿತ್ ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದು, ಆತನ ಅಗಲಿಕೆಯಿಂದ ತಾಯಿ ಕಣ್ಣೀರಿನಲ್ಲಿ ಕಾಲ ಕಳೆಯುವಂತಾಗಿದೆ. ಇನ್ನು ಘಟನಾ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

30/07/2022 10:07 pm

Cinque Terre

26.45 K

Cinque Terre

1

ಸಂಬಂಧಿತ ಸುದ್ದಿ