ನೆಲಮಂಗಲ: ಆತ ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ. ನೆಲಮಂಗಲದಿಂದ ಬೆಂಗಳೂರು ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಆ ವೇಳೆ ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹೋಮ್ ಗಾರ್ಡ್ ಸ್ಥಳದಲ್ಲೇ ಸಾವನ್ನೊಪ್ಪಿದ್ದಾರೆ.
ಬೆಂಗಳೂರು ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ನೆಲಮಂಗಲ ಪಟ್ಟಣದ ಎಂ.ಜಿ.ರಸ್ತೆ ನಿವಾಸಿ ಮಂಜುನಾಥ್ (39) ಸ್ಥಳದಲ್ಲಿಯೇ ಸಾವನ್ನಪ್ಪಿದ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲೂ ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸಿ ಉತ್ತಮ ಕೆಲಸಗಾರ ಎಂಬ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಮಂಜುನಾಥ್, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸಾವನ್ನಪಿದ್ದಾರೆ.
ಇನ್ನೂ ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸುಮಿತ್ರ,ಪಬ್ಲಿಕ್ ನೆಕ್ಸ್ಟ್,ನೆಲಮಂಗಲ
Kshetra Samachara
05/08/2022 08:52 pm