ಬೆಂಗಳೂರು: ನಗರದ ನಾಗರಬಾವಿ ರಿಂಗ್ ರಸ್ತೆಯಲ್ಲಿ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ನಾಗರಭಾವಿ ರಿಂಗ್ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಕ್ಯಾಂಟರ್ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದು, ದ್ವಿಚಕ್ರ ವಾಹನ ಸವಾರನ ಗುರುತು ಸಹ ಪತ್ತೆಯಾಗಿಲ್ಲ. ಸದ್ಯ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್ ವಾಹನವನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Kshetra Samachara
13/08/2022 04:20 pm