ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ಅರಿವೇಸಂದ್ರ ಬಳಿ ನೆಡೆದಿದೆ.

ಬೆಂಗಳೂರಿನ ಲಗ್ಗೆರೆ ನಿವಾಸಿ ರಾಜಣ್ಣ (38) ಮೃತ ದುರ್ದೈವಿ. ಟಿ.ಬೇಗೂರು- ತ್ಯಾಮಗೊಂಡ್ಲು ರಸ್ತೆಯಲ್ಲಿ ಬೈಕ್ ಚಲಾಯಿಸಿಕೊಂಡು ತೆರಳುತ್ತಿದ್ದ ವೇಳೆ ಅತಿ ವೇಗವಾಗಿ ಮತ್ತೆ ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ರಾಜಣ್ಣ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದ ಬಳಿಕ ಕನಿಷ್ಠ ಮಾನವೀಯತೆ ತೋರಿದೆ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡ ತ್ಯಾಮಗೊಂಡ್ಲು ಠಾಣಾ ಪೊಲೀಸ್ರು, ಮೃತದೇಹವನ್ನು ಶವಪರೀಕ್ಷೆ ನೆಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಸುಮಿತ್ರ, ಪಬ್ಲಿಕ್ ನೆಕ್ಸ್ಟ್, ನೆಲಮಂಗಲ

Edited By : Somashekar
PublicNext

PublicNext

28/08/2022 10:23 pm

Cinque Terre

52.57 K

Cinque Terre

0

ಸಂಬಂಧಿತ ಸುದ್ದಿ