ಬೆಂಗಳೂರು: ಜೆ.ಪಿ ನಗರದ ಜಿಎನ್‌ಆರ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದ 3ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಖಾಸಗಿ ಕನ್ಸಲ್ಟೆನ್ಸಿ ಕಾರ್ಯನಿರ್ವಹಿಸುತ್ತಿದ್ದ ಪ್ಲೋರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಈ ವೇಳೆ ಕಚೇರಿಯಲ್ಲಿದ್ದ ಕಂಪ್ಯೂಟರ್ಸ್, ಪೀಠೋಪಕರಣ ಸಂಪೂರ್ಣ ಭಸ್ಮವಾಗಿದೆ. ಲಕ್ಷಾಂತರ ಮೌಲ್ಯದ ಕಂಪ್ಯೂಟರ್, ಸರ್ವರ್ಸ್ ಬೆಂಕಿಗಾಹುತಿಯಾಗಿದ್ದು, ವಾರಾಂತ್ಯದ ರಜೆ ಇದ್ದಿದ್ದರಿಂದ ಅದೃಷ್ಟವಾಶತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಕೂಡಲೇ 2 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಜೆಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.
PublicNext
03/09/2022 08:08 pm