ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಕೃಷಿ ಉತ್ಪನ್ನಕ್ಕೆ ಲಾಭದಾಯಕ ಬೆಲೆ ಆಗ್ರಹಿಸಿ ಭಾಕಿಸಂ ಪ್ರತಿಭಟನೆ

ಆನೇಕಲ್:‌ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಕ್ಕೆ ಲಾಭದಾಯಕ ಬೆಲೆ ನೀಡುವಂತೆ ಆಗ್ರಹಿಸಿ ಆನೇಕಲ್ ಪಟ್ಟಣ ತಾಲೂಕು ಕಚೇರಿಯಲ್ಲಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ನಡೆಯಿತು. ಸಂಘದ ತಾಲ್ಲೂಕು ಮುಖಂಡ ಶ್ರೀನಿವಾಸ್ ರೆಡ್ಡಿ ನೇತೃತ್ವ ವಹಿಸಿದ್ದರು. ಹಲವು ಪದಾಧಿಕಾರಿಗಳು ಭಾಗವಹಿಸಿ ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಬೇರೆ ಕ್ಷೇತ್ರಗಳಲ್ಲಿ ತಾವು ಉತ್ಪಾದಿಸಿದ ವಸ್ತುಗಳಿಗೆ ಅವರೇ ದರ ನಿಗದಿ ಮಾಡುವ ಅವಕಾಶವಿದೆ. ಆದರೆ, ಕೃಷಿಯಲ್ಲಿ ಯಾವುದೇ ಅವಕಾಶವಿಲ್ಲ. ರೈತರ ಉತ್ಪನ್ನಕ್ಕೆ ಸೂಕ್ತ ಬೆಂಬಲ ಬೆಲೆ ಸಿಗದೆ ನಷ್ಟ ಅನುಭವಿಸಿರುವ ಹಲವು ನಿದರ್ಶನಗಳಿವೆ. ಜೊತೆಗೆ ಕೃಷಿ ಕ್ಷೇತ್ರದಲ್ಲಿ ಮಧ್ಯವರ್ತಿ ಹಾವಳಿಯಿಂದ ರೈತರು ನಷ್ಟದಲ್ಲಿಯೇ ಜೀವನ ಸಾಗಿಸಬೇಕಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಕೃಷಿ ಉತ್ಪನ್ನಕ್ಕೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ರೈತರು ಆಗ್ರಹಿಸಿದರು. ಬಳಿಕ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

Edited By : Shivu K
Kshetra Samachara

Kshetra Samachara

12/01/2022 09:38 am

Cinque Terre

484

Cinque Terre

0