ರಸ್ತೆಗೆ ಅಡ್ಡಲಾಗಿ ನಾಯಿ ಬಂದ ಕಾರಣ ಸಿಮೆಂಟ್ ಮಿಕ್ಸರ್ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ, ಹಿಂಬದಿ ಬರುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿ ಹೊಡೆದು ತುಮಕೂರು ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಇನ್ನೂ ನೆಲಮಂಗಲ ತಾಲ್ಲೂಕು ತಿಪ್ಪಗೊಂಡನಹಳ್ಳಿ ಬಳಿ ಈ ಘಟನೆ ನೆಡೆದಿದ್ದು, ಬೆಂಗಳೂರಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 23 ಮಂದಿ ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ ಚಾಲಕ ಮತ್ತು ಬಸ್ ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ರೆ, ಲಗ್ಗೆರೆಯ ಪ್ರಶಾಂತ್ ಎಂಬುವರಿಗೆ ಸೇರಿದ ಸ್ವಿಫ್ಟ್ ಕಾರು ಜಖಂಗೊಂಡಿದೆ.
ಇನ್ನೂ ಹೆದ್ದಾರಿಯಲ್ಲಿ ಅಪಘಾತ ಹಿನ್ನಲೆ ಕೆಲಕಾಲ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿ, ಗಾಯಾಳುಗಳನ್ನ ನೆಲಮಂಗಲ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
16/02/2022 01:24 pm