ಬೆಂಗಳೂರು: ರಸ್ತೆ ದಾಟುವಾಗ ಯುವತಿಗೆ ಕಾರ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ನಡೆದಿದೆ. ಇದೇ ತಿಂಗಳ 17ರಂದು ಘಟನೆ ನಡೆದಿದ್ದು, ಘಟನೆಯಲ್ಲಿ ಅಶ್ವಿನಿ ಎಂಬ ಯುವತಿ ಗಾಯಗೊಂಡಿದ್ದಾಳೆ.
ಆತುರತಾರುವಾಗಿ ರಸ್ತೆ ದಾಟುವಾಗ ಕಾರ್ ಡಿಕ್ಕಿಯಿಂದ ಯುವತಿ ಡಿವೈಡರ್ ಮೇಲೆ ಹಾರಿ ಬಿದ್ದಿದ್ದಾಳೆ. ರಸ್ತೆಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಅಪಘಾತ ದೃಶ್ಯ ಸೆರೆಯಾಗಿದ್ದು, ಸದ್ಯ ಅಪಘಾತದಲ್ಲಿ ಗಾಯಗೊಂಡಿರುವ ಅಶ್ವಿನಿಗೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಆರ್.ಟಿ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
21/09/2022 12:13 pm