ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಒಂದು ಬಸ್ ಹಾಗೂ ಆರು ಕಾರುಗಳು ಜಖಂಗೊಂಡಿವೆ.
ಬೆಂಗಳೂರು ಮೈಸೂರು ಹೆದ್ದಾರಿ ಸಾವಿನ ಹೆದ್ದಾರಿಯಾಗಿ ಕುಖ್ಯಾತಿ ಪಡೆಯುತ್ತಿದೆ. ಉಭಯ ನಗರಗಳನ್ನು 75 ನಿಮಿಷಗಳಲ್ಲಿ ತಲುಪಲು ಅನುಕೂಲ ಆಗುವಂತೆ ಈ ರಸ್ತೆಯನ್ನು ನಿರ್ಮಿಸಲಾಗಿದೆ. ಆದರೆ ಈ ಹೆದ್ದಾರಿಯಲ್ಲಿ ಇತ್ತೀಚೆಗೆ ಅಪಘಾತಗಳು ಹೆಚ್ಚುತ್ತಿವೆ.
PublicNext
02/10/2022 12:41 pm