ನೆಲಮಂಗಲ: ಕಾರು ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದ್ದು, ದ್ವಿಚಕ್ರವಾಹನ ಸವಾರರಿಬ್ಬರೂ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ನೆಲಮಂಗಲದ ತೊಣಚಿಗುಪ್ಪೆ ಬಳಿ ನೆಡೆದಿದೆ.
ಮಂಡ್ಯ ಮೂಲದ ರಘು, ಚನ್ನಕೇಶವ ಎಂಬುವರಿಗೆ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳಿಬ್ಬರು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
09/10/2022 10:10 pm