ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ

ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್‌ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಕೋಲಾರ ಮೂಲದ ಶಿಲ್ಪಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರು. ಮೊದಲ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯಾಗಿದ್ದ ಶಿಲ್ಪಾ ಅವರು ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದಾರೆ. ಇದನ್ನು ಗಮನಿಸದ ಚಾಲಕ ಬಸ್ ಅನ್ನು ಮುಂದಕ್ಕೆ ಓಡಿಸಿದ್ದಾರೆ. ಪರಿಣಾಮ ವಿದ್ಯಾರ್ಥಿ ಶಿಲ್ಪಾ ಸೊಂಟದ ಮೇಲೆ ಬಸ್ ಹರಿದಿದೆ. ಸದ್ಯ ಘಟನೆ ಖಂಡಿಸಿ ವಿದ್ಯಾರ್ಥಿಗಳು ‌ಪ್ರತಿಭಟನೆ ನಡೆಸುತ್ತಿದ್ದಾರೆ.

Edited By : Shivu K
PublicNext

PublicNext

10/10/2022 12:13 pm

Cinque Terre

46.04 K

Cinque Terre

2

ಸಂಬಂಧಿತ ಸುದ್ದಿ