ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅ.21ರಂದು ಗಂಧದಗುಡಿ ಪ್ರೀ ರಿಲೀಸ್ ಇವೆಂಟ್; ಸಿಎಂಗೆ ರಾಜ್ ಕುಟುಂಬದಿಂದ ಆಹ್ವಾನ

ಬೆಂಗಳೂರು: ನಗರದ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅಕ್ಟೋಬರ್ 21ರಂದು 'ಗಂಧದಗುಡಿ' ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್‌ ಕುಟುಂಬವು ಆಹ್ವಾನ ನೀಡಿದೆ.

ಅಕ್ಟೋಬರ್ 28ರಂದು ಗಂಧದಗುಡಿ ಚಿತ್ರ ಬಿಡುಗಡೆಯಾಗಲಿದೆ. ಅಕ್ಟೋಬರ್ 29ಕ್ಕೆ ಪುನೀತ್ ರಾಜ್‌ಕುಮಾರ್ ನಿಧನರಾಗಿ 1 ವರ್ಷವಾಗುತ್ತದೆ. ಹೀಗಾಗಿ ಪ್ರೀ ರಿಲೀಸ್ ಇವೆಂಟ್‌ಗೆ ದಕ್ಷಿಣ ಭಾರತದ ಚಿತ್ರರಂಗದ ಎಲ್ಲಾ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಸಿಎಂ ಬೊಮ್ಮಾಯಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು. ಈ ವೇಳೆ ರಾಘವೇಂದ್ರ ರಾಜಕುಮಾರ್‌, ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಇದ್ದರು.

Edited By : Vijay Kumar
PublicNext

PublicNext

11/10/2022 11:27 am

Cinque Terre

10.75 K

Cinque Terre

0

ಸಂಬಂಧಿತ ಸುದ್ದಿ