ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ

ಬೆಂಗಳೂರು : ಗೃಹಿಣಿಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ಸಂಜೆ ಕಾಟನ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೀತಾ (37) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಕೌಟುಂಬಿಕ ಕಲಹವೇ ಕಾರಣ ಎಂದಿರುವ ಮೃತಳ ಪೋಷಕರು ಆಕೆಯ ಪತಿ ಮುರುಳಿ ಮೋಹನನೇ ಹತ್ಯೆಗೈದಿದ್ದಾನೆ ಎಂದು ಆರೋಪಿಸುತ್ತಿದ್ದಾರೆ.

17 ವರ್ಷಗಳ ಹಿಂದೆ ಗೀತಾ ಹಾಗೂ ಮುರುಳಿ ಮೋಹನ್ ಮದುವೆಯಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಇಬ್ಬರ ನಡುವೆ ಕಲಹವಾಗಿತ್ತು. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

03/11/2024 01:23 pm

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ