ಜೆಜೆಆರ್ ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, 'ಘಟನೆ ಬಗ್ಗೆ ಬೆಳಗ್ಗೆ ಮಾಹಿತಿ ಸಿಕ್ಕಿದೆ. ಮಾಹಿತಿ ಅನ್ವಯ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ನಾಳೆಯ ಒಳಗಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಷ್ಟೇ ಅಲ್ಲದೆ ಯಾವುದೇ ಕಾರಣಕ್ಕೂ ಹಲ್ಲೆಗೆ ಒಳಗಾದವರ ಜೊತೆಗೆ ರಾಜೀ ಮಾತಿಲ್ಲ. ರಾಜೀ ಮಾಡಿಸಲು ಮುಂದಾದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
PublicNext
13/09/2022 03:25 pm