ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹುಡುಗ-ಹುಡುಗಿ ಜೊತೆಯಲ್ಲಿದಿದ್ದಕ್ಕೆ ಪುಂಡರಿಂದ ನೈತಿಕ ಪೊಲೀಸ್‌ಗಿರಿ

ದೊಡ್ಡಬಳ್ಳಾಪುರ: ಹುಡುಗಿ ಹುಡುಗಿ ಜೊತೆಯಾಗಿ ಬೈಕ್‌ನಲ್ಲಿ ಹೋಗುತ್ತಿರುವುದನ್ನ ಕಂಡ ಪುಂಡರ ಗ್ಯಾಂಗ್ ಇಬ್ಬರ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಣರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸೆಪ್ಟೆಂಬರ್ 25ರ ಭಾನುವಾರ ಮಧ್ಯಾಹ್ನ 1:30 ಸಮಯದಲ್ಲಿ ಬೈಕ್‌ನಲ್ಲಿ ಹುಡುಗ ಹುಡುಗಿ ಜೊತೆಯಲ್ಲಿ ಹೋಗುತ್ತಿದ್ದರು. ಇದೇ ವೇಳೆ ನಗರದ ಇಸ್ಲಾಂಪುರದ ನಿವಾಸಿ ಹುಜೂರ್ ಮತ್ತು ಆತನ ಸ್ನೇಹಿತರು ಬೈಕ್ ಅಡ್ಡಗಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ಮೆರೆದಿದ್ದಾರೆ.

ಹಲ್ಲೆ ನಡೆಸಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಹಿನ್ನಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪುಂಡರ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Somashekar
PublicNext

PublicNext

28/09/2022 05:59 pm

Cinque Terre

31.25 K

Cinque Terre

0