ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್ ಸೇರಿದಂತೆ ಐವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಘಟಕದ ಜಾರಿ ನಿರ್ದೇಶಾನಾಲಯ ಅಧಿಕಾರಿಗಳು ಐವರು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ.
ಪಿಎಸ್ಐ ನೇಮಕಾತಿ ಜಾಲದಲ್ಲಿ ಪ್ರತ್ಯೇಕವಾಗಿ 8 ಎಫ್ಐಆರ್ ದಾಖಲಿಸಿ ಇದುವರೆಗೂ 80 ಮಂದಿ ಆರೋಪಿಗಳನ್ನ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಮೂರು ಪ್ರತ್ಯೇಕವಾಗಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಕ್ರಮವಾಗಿ ಪಿಎಸ್ಐ ಹುದ್ದೆ ಪಡೆಯಲು ಆಭ್ಯರ್ಥಿಗಳು ಮಧ್ಯವರ್ತಿಗಳ ಮುಖಾಂತರ ನೇಮಕಾತಿ ವಿಭಾಗದ ಸಿಬ್ಬಂದಿ ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ಸಿಐಡಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಈ ಸಂಬಂಧ ಪಿಎಂಎಲ್‌ಎ ಕಾಯ್ದೆ ಉಲ್ಲಂಘನೆ ಕಂಡುಬಂದಿದ್ದರಿಂದ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಇ.ಡಿ ಅಧಿಕಾರಿಗಳು ಡಿವೈಎಸ್‌ಪಿ ಶಾಂತಕುಮಾರ್, ಎಫ್‌ಡಿಎ ಹರ್ಷ, ಆಭ್ಯರ್ಥಿಗಳಾದ ಜಾಗೃತ್, ಮಂಜುನಾಥ್ ಹಾಗೂ ಶರತ್ ಕುಮಾರ್ ಅವರನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
Kshetra Samachara
21/09/2022 11:17 pm