ಪುಲಕೇಶಿನಗರ: ಕಳೆದ 20 ದಿನಗಳ ಹಿಂದೆ ಕಾಣೆಯಾಗಿ ಆತಂಕಕ್ಕೆ ಎಡೆಮಾಡಕೊಟ್ಟಿದ್ದ ಮೂವರು ಶಾಲಾ ಬಾಲಕಿಯರನ್ನು ಕೊನೆಗೂ ಪುಲಕೇಶಿನಗರ ಪೊಲೀಸರು ಚೆನ್ನೈನಲ್ಲಿ ಪತ್ತೆಹಚ್ಚಿ ನಗರಕ್ಕೆ ಕರೆತಂದಿದ್ದಾರೆ.
ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಮೂವರು ವಿದ್ಯಾರ್ಥಿಯರು ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಶಾಲಾ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಮತ್ತೋರ್ವ ಬಾಲಕಿ ಮನೆಯಿಂದಲೇ ಶಾಲೆಗೆ ತೆರಳುತ್ತಿದ್ದರು. ಓದುವ ವಿಷಯವಾಗಿ ಮೂವರ ಬಾಲಕಿಯರ ಮನೆಗಳಲ್ಲಿ ಪೋಷಕರು ಒತ್ತಡ ಹೇರಿದ್ದರು ಎನ್ನಲಾಗಿದ್ದು, ಇದರಿಂದ ಅಸಮಾಧಾನಗೊಂಡಿದ್ದ ಬಾಲಕಿಯರು ವ್ಯವಸ್ಥಿತ ಸಂಚು ರೂಪಿಸಿ ಯಾರಿಗೂ ಹೇಳದೆ ನಾಪತ್ತೆಯಾಗಿದ್ದರು.
ಓದುವ ವಿಷಯವಾಗಿ ಮೂವರು ಬಾಲಕಿಯರ ಮನೆಗಳಲ್ಲಿ ಪೋಷಕರು ಬೈದು ಬುದ್ಧಿ ಹೇಳಿದ್ದರು. ಇದರಿಂದ ಒತ್ತಡಕ್ಕೆ ಒಳಗಾದ ಅಪ್ತಾಪ್ತೆಯರು ಊರು ಬಿಡಲು ನಿರ್ಧರಿಸಿಕೊಂಡಿದ್ದರು. ಮನೆಯಲ್ಲಿ ಕಷ್ಟವಿದೆ ಎಂದು ಸ್ನೇಹಿತೆಯರು ಹಾಗೂ ಪರಿಚಯಸ್ಥರಿಂದ ಸುಮಾರು 21 ಸಾವಿರ ರೂಪಾಯಿ ಹಣ ಸಂಗ್ರಹಿಸಿದ್ದರು. ನಂತರ ಇದೇ ತಿಂಗಳು 6 ರಂದು ಹಾಸ್ಟೆಲ್ ವಾರ್ಡನ್ ಹಾಗೂ ಸೆಕ್ಯೂರಿಟಿ ಕಣ್ತಪ್ಪಿಸಿ ಲಗೇಜ್ ಸಮೇತ ಏರಿಯಾ ಬಿಟ್ಟಿದ್ರು. ಮಾರ್ಗ ಮಧ್ಯೆ ಮತ್ತೋರ್ವ ಬಾಲಕಿ ಕೂಡಿಕೊಂಡು ಆಟೋ ಮೂಲಕ ಸೇವಾನಗರಕ್ಕೆ ತೆರಳಿದ್ದರು.
ಅಂಗಡಿಯಲ್ಲಿ ಬಟ್ಟೆ ಖರೀದಿಸಿ ಕಂಟ್ಮೋನೆಂಟ್ ರೈಲು ನಿಲ್ದಾಣಕ್ಕೆ ಬಂದು ಚೆನ್ನೈ ರೈಲು ಹತ್ತಿದ್ದರು. ಬಳಿಕ ಚೆನ್ನೈನಲ್ಲಿ ಇಳಿದು ಆಟೊ ಚಾಲಕನನ್ನ ಪರಿಚಯಿಸಿಕೊಂಡು ಮೂವರು ಅನಾಥೆಯರು ಎಂದು ಹೇಳಿದ್ದರು. ಇದನ್ನ ನಂಬಿದ ಆಟೊ ಚಾಲಕ ತಮ್ಮ ಮನೆಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಣೆಯಾಗಿ ಕಳೆದ 20 ದಿನ ಕಳೆದರೂ ಬಾಲಕಿಯರು ಇರುವಿಕೆ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಈ ನಡುವೆ ನಾಪತ್ತೆಯಾಗಿದ್ದ ಮೂವರಲ್ಲಿ ಓರ್ವಳು ಸ್ನೇಹಿತೆಗೆ ಕರೆ ಮಾಡಿ ಮಾತನಾಡಿದ್ದಳು. ಈ ಬಗ್ಗೆ ಸ್ನೇಹಿತೆ ಪೊಲೀಸರಿಗೆ ಮಾಹಿತಿ ನೀಡಿದ್ದಳು. ಇದರಂತೆ ಕಾರ್ಯಾಚರಣೆ ಕೈಗೊಂಡು ಪೊಲೀಸರು ನಗರಕ್ಕೆ ಕರೆತಂದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಮೂವರು ಅಪ್ರಾಪ್ತೆಯರನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
PublicNext
26/09/2022 05:26 pm