ಬೆಂಗಳೂರು: ಬ್ಯಾಂಕಾಕ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ ಐಪೋನ್ ಕಳ್ಳ ಸಾಗಾಣಿಕೆ ಬೆಳಕಿಗೆ ಬಂದಿದೆ.ಬಂಧಿತ ಆರೋಪಿಯಿಂದ 16 ಹೊಸ ಐಫೋನ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಭಾರತದಲ್ಲಿ ಐಫೋನ್ 14 ಪ್ರೊ ಮ್ಯಾಕ್ಸ್ಗೆ 1 ಲಕ್ಷದ 90 ಸಾವಿರ ರೂ. ಬೆಲೆ ಇದೆ.
ವಿದೇಶದಲ್ಲೊ 96 ಸಾವಿರ ರೂ. ಮೌಲ್ಯ ಹೊಂದಿದೆ. ಇದೇ ಕಾರಣಕ್ಕೆ ಲಕ್ಷ ಹಣ ಉಳಿಸಲು ಕಳ್ಳದಾರಿಯಲ್ಲಿ ಐಫೋನ್ ತರ್ತಿದ್ದ.ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮೊಬೈಲ್ ಸೀಜ್ ಮಾಡಿ ತನಿಖೆ ಮುಂದುವರೆಸಿದ್ದಾರೆ.
Kshetra Samachara
01/10/2022 02:57 pm