ನೆಲಮಂಗಲ: ಮನೆ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಸ್ಥಳೀಯರು ಗೂಸಾ ಕೊಟ್ಟ ಘಟನೆ ನೆಲಮಂಗಲ ತಾಲ್ಲೂಕು ದಾಬಸ್‌ಪೇಟೆ ಸಮೀಪದ ಅನ್ನಪೂರ್ಣೇಶ್ವರಿ ಲೇಔಟ್‌ನಲ್ಲಿ ನಡೆದಿದೆ.
ಇನ್ನೂ ಬಡಾವಣೆಯ ಸುಜಾತ ಎಂಬುವರ ಮನೆಗೆ ಕನ್ನ ಹಾಕಲು ಯತ್ನಿಸುತ್ತಿದ್ದ ತುಮಕೂರಿನ ಸಿರಾಜ್ ಖಾನ್ (63) ಎಂಬಾತನನ್ನು ಹಿಡಿದು ಥಳಿಸಿದ್ದಂತೆ, ಕೃತ್ಯದ ಸತ್ಯಾಂಶ ಬಾಯಿ ಬಿಟ್ಟಿದ್ದಾನೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
10/10/2022 10:29 pm