ಕುಡಿದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಚನ್ನವೀರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಹಲ್ಲೆಗೊಳಗಾದ ಮುನಿರಾಜು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಹಲ್ಲೆ ನಡೆಸಿ ಆರೋಪಿ ಮುತ್ತುರಾಜುನನ್ನ ಪೊಲೀಸರು ಬಂಧಿಸಿದ್ದಾರೆ.
ಕೂಲಿ ಕೆಲಸ ಮಾಡುವ ಮುನಿರಾಜು ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದಾಗ, ಏಕಾಏಕಿ ಬಂದ ಮುತ್ತುರಾಜು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮಚ್ಚಿನ ಏಟಿನಿಂದ ಪಾರಾಗುವ ಯತ್ನದಲ್ಲಿ ಮಚ್ಚಿನೇಟು ಕೈಗೆ ಬಿದ್ದಿದೆ. ಮಚ್ಚಿನೇಟಿನಿಂದ ರಕ್ತನಾಳ ಕಟ್ ಆಗಿದೆ. ಗಾಯಗೊಂಡ ಮುನಿರಾಜುನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಮುತ್ತುರಾಜುನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
PublicNext
11/10/2022 06:21 pm