ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮವು ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಅವರು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ಯ ಅಂಗವಾಗಿ ಆಯೋಜಿಸಿದ್ದ ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಪ್ರವಾಸೋದ್ಯಮ ನೀತಿ 2020-26ರ (ಪರಿಷ್ಕತ) ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು ಸ್ಥಳಗಳು ಕರ್ನಾಟಕದಲ್ಲಿವೆ.

"ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ನಮಗೆ ಸಿ.ಆರ್.ಝೆಡ್ ನಿಯಮದಿಂದ ತೊಡಕಾಗುತ್ತಿತ್ತು. ಹಲವಾರು ಬಾರಿ ಸಿ.ಆರ್.ಝೆಡ್ ನಿಯಮದಿಂದ ವಿನಾಯಿತಿ ಬಯಸಿ ಕೇಂದ್ರಕ್ಕೆ ಮನವಿ ಸಲ್ಲಿಸುತ್ತಿದ್ದವು.ಆದರೇ ನಾನು ಮುಖ್ಯಮಂತ್ರಿಯಾದ ಸಚಿವ ಆನಂದ್ ಸಿಂಗ್ ರವರಿಗೆ ಸಿ.ಆರ್.ಝೆಡ್ ನಿಯಮದಿಂದ ವಿನಾಯಿತಿ ಪಡೆಯಲು ನಿರಂತರ ಪ್ರಯತ್ನ ಮಾಡಲು ತಿಳಿಸಿದೆ. ಅದರ ಫಲಶ್ರುತಿ ಎಂಬಂತೆ ಸಿ.ಆರ್.ಝಡ್ ನಿಯಮದಿಂದ ನಮಗೆ ವಿನಾಯಿತಿ ದೊರೆತಿದೆ."

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : Nagaraj Tulugeri
PublicNext

PublicNext

29/09/2022 05:27 pm

Cinque Terre

15.27 K

Cinque Terre

0

ಸಂಬಂಧಿತ ಸುದ್ದಿ