ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ : ಕುಮಾರ ಷಷ್ಠಿ ಹಿನ್ನೆಲೆ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ, ಹರಿದು ಬಂದ ಭಕ್ತಸಾಗರ

ದೊಡ್ಡಬಳ್ಳಾಪುರ : ಕುಮಾರ ಷಷ್ಠಿ ಹಿನ್ನೆಲೆ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಇರುವುದರಿಂದ ಕ್ಷೇತ್ರಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, ದೇವರ ದರ್ಶನ ಪಡೆಯುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಮುಖ ಧಾರ್ಮಿಕ ಕ್ಷೇತ್ರ. ಇಂದು ಕುಮಾರ ಷಷ್ಠಿ ಹಿನ್ನೆಲೆ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಇಂದು ಸ್ವಾಮಿ ದರ್ಶನ ಪಡೆಯುವುದರಿಂದ ಸರ್ಪ ದೋಷ ನಿವಾರಣೆಯಾಗುವ ನಂಬಿಕೆ ಇದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.

ಜನವರಿ ತಿಂಗಳಲ್ಲಿ ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಕೋವಿಡ್ ಹಿನ್ನಲೆ ದೇವಸ್ಥಾನದ ಪ್ರಾಂಗಣದಲ್ಲಿ ಸಾಂಕೇತಿಕವಾಗಿ ಸರಳ ರಥೋತ್ಸವ ನಡೆಸಲಾಗಿತು ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡಲಾಗಿತ್ತು, ಆದರೆ ಇಂದು ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರುವ ಹಿನ್ನಲೆ ಕ್ಷೇತ್ರಕ್ಕೆ ಹೆಚ್ಚಿನ ಜನರು ಭೇಟಿ ನೀಡುತ್ತಿದ್ದಾರೆ.

Edited By : Shivu K
Kshetra Samachara

Kshetra Samachara

06/02/2022 03:40 pm

Cinque Terre

772

Cinque Terre

0

ಸಂಬಂಧಿತ ಸುದ್ದಿ