ಬೆಂಗಳೂರು: ಕೆಆರ್ ಪುರ ಕ್ಷೇತ್ರದ ರಾಮಮೂರ್ತಿ ನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಗಳ ಸಮನ್ವಯ ವೇದಿಕೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಶೈಕ್ಷಣಿಕ ಕಾರ್ಯಗಾರ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮಕ್ಕಳನ್ನು ಮಾನವ ಸಂಪನ್ಮೂಲವಾಗಿ ರೂಪಿಸುವ ಮೂಲಕ ದೇಶದ ಅಭಿವೃದ್ಧಿಗೆ ಶಿಕ್ಷಕರು ಮಹತ್ವದ ಕೊಡುಗೆ ನೀಡುವುದರ ಜೊತೆಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಶಿಕ್ಷಕರನ್ನು ಕೊಂಡಾಡಿದರು.
ಮಕ್ಕಳನ್ನು ತಿದ್ದುವ ಮೂಲಕ ಶಿಲ್ಪಿಗಳ ಸ್ವರೂಪ ನೀಡುವ ಶಿಕ್ಷಕರ ಕಾರ್ಯ ಮಹತ್ವದಾಗಿದ್ದು, ಇದಕ್ಕೆ ಪೋಷಕರು ಕೂಡಾ ಶಿಕ್ಷಕರ ಜೊತೆಗೆ ಕೈಜೋಡಿಸಿವಂತೆ ಮನವಿ ಮಾಡಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ, ಇಓ ಮಂಜುನಾಥ್, ಮಾಜಿ ಪಾಲಿಕೆ ಸದಸ್ಯ ಅಂತೋಣಿ ಸ್ವಾಮಿ, ಬಿಜೆಪಿ ನಗರ ಜಿಲ್ಲಾ ಉಪಾಧ್ಯಕ್ಷ ಮುನೇಗೌಡ, ಎಸ್.ಡಿ. ಎಂಸಿ ಸದಸ್ಯ ಇಟಾಚಿ ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
30/09/2022 08:00 am