ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು "ಮಹಾತ್ಮಗಾಂಧೀಜಿ" ರವರ 154ನೇ ಜನ್ಮ ದಿನಾಚರಣೆ ಹಾಗೂ ಭಾರತದ 2ನೇ ಪ್ರಧಾನಮಂತ್ರಿ, "ಲಾಲಬಹದ್ದೂರ್ ಶಾಸ್ತ್ರಿ" ಅವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯ್ತು.
ಹುಟ್ಟುಹಬ್ಬಗಳ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು "ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ" ಕಾರ್ಯಕ್ರಮವನ್ನು ಆಚರಿಸಲಾಯಿತು..
ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ಬಾಲಕೃಷ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಸಹಾಯಕ ನಿರ್ದೇಶಕರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾಇಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕಿಯರಾದ ಸುಬ್ಬಾರಾವ್.ಎಸ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು..
Kshetra Samachara
02/10/2022 04:06 pm