ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೊಲೀಸ್ ಸಬ್​ ಇನ್ಸ್​ಪೆಕ್ಟರ್‌ಗಳಿಗೆ ಗೋಹತ್ಯೆ ನಿಷೇಧ ಕಾಯ್ದೆ ತರಬೇತಿ

ಹೆಬ್ಬಾಳ: ಪ್ರಾಣಿಗಳ ಮೇಲೆ ನಡೆಯುವ ಕ್ರೌರ್ಯ ತಡೆಗಟ್ಟಲು ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪಾಲನೆ ಮಾಡಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವ ಚಿಂತನೆ ಸರ್ಕಾರದ ಹಂತದಲ್ಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.

ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶುಪಾಲನಾ ಭವನದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸಭೆ ನಡೆಸಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆಯಡಿ ರಾಜ್ಯಾದ್ಯಂತ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಆದರೆ ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಆದೇಶ ಪಾಲನೆಯಾಗದಿರುವುದರಿಂದ ಅಕ್ರಮ ಜಾನುವಾರು ಸಾಗಾಣೆದಾರರು ಮತ್ತು ಅಕ್ರಮ ಕಸಾಯಿಖಾನೆಗಳ ಮಾಲೀಕರು ಶಿಕ್ಷೆಯಿಂದ ಪಾರಾಗುತ್ತಿದ್ದಾರೆ.

ಹೀಗಾಗಿ ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವುದರಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಿದೆ ಎಂದರು.

ವಿಡಿಯೋ: ಪ್ರಭು ಬಿ.ಚವ್ಹಾಣ್

Edited By : Shivu K
PublicNext

PublicNext

12/09/2022 07:16 pm

Cinque Terre

28.71 K

Cinque Terre

0

ಸಂಬಂಧಿತ ಸುದ್ದಿ