ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದಿ. ಅನಂತಕುಮಾರ್‌ 63ನೇ ಜನ್ಮದಿನ; ಪ್ರೇರಣಾದಾಯಿ ಕಾರ್ಯಕ್ರಮಗಳ ಆಯೋಜನೆ

ಬೆಂಗಳೂರು: ಸೆಪ್ಟೆಂಬರ್‌ 22 ದಿವಂಗತ ಶ್ರೀ ಅನಂತಕುಮಾರ್‌ ಅವರ 63 ನೇ ಜನ್ಮದಿನ. 63 ನೇ ಜನ್ಮದಿನವನ್ನ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಅನಂತಕುಮಾರ್‌ ಪ್ರತಿಷ್ಠಾನ ಮತ್ತು ಅದಮ್ಯ ಚೇತನ ಸಂಸ್ಥೆಗಳು ಜಂಟಿಯಾಗಿ ಅನೇಕ ಪ್ರೇರಣದಾಯಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ.

ಸೆಪ್ಟೆಂಬರ್‌ 21 ರ ಸಂಜೆ 4.30 ಕ್ಕೆ ಅದಮ್ಯ ಚೇತನ ಸಂಸ್ಥೆ ಊಟ ಪೂರೈಸುತ್ತಿರುವ 70 ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿವೃತ್ತ ನ್ಯಾಯಮೂರ್ತಿಗಳಾದ ಎನ್‌ ಕುಮಾರ್‌ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 6 ಗಂಟೆಗೆ ಶ್ರೀ ಅನಂತಕುಮಾರ್‌ ಅವರ 1959 ರಿಂದ 1987 ರ ವರೆಗಿನ ಅವರ ಜೀವನದ ಬಗೆಗಿನ “ಅನಂತಯಾನ” ಪುಸ್ತಕದ ಮೊದಲ ಭಾಗವನ್ನು ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಲೋಕಾರ್ಪಣೆಗೊಳಿಸಲಿದ್ದಾರೆ.

ಸೆಪ್ಟೆಂಬರ್‌ 22 ರಂದು ಬೆಳಿಗ್ಗೆ 11 ಗಂಟೆಗೆ 1987 ರಿಂದ 1997 ರ ದಶಕದಲ್ಲಿ ಅನಂತಕುಮಾರ್‌ ಅವರ ಜೊತೆ ಕೆಲಸ ಮಾಡಿದ ಪ್ರಮುಖ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವರಾದ ಕೆ.ಎಸ್‌. ಈಶ್ವರಪ್ಪ, ಹಿರಿಯ ನಾಯಕರಾದ ಡಿ ಹೆಚ್‌ ಶಂಕರಮೂರ್ತಿ ಸೇರಿದಂತೆ ಪ್ರಮುಖ ಭಾಗವಹಿಸಲಿದ್ದಾರೆ.

ಸೆಪ್ಟೆಂಬರ್‌ 22 ರಂದು ಸಂಜೆ 4.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌ ಆರ್‌ ರಂಗನಾಥ್‌ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಿಕೊಡಲಿದ್ದಾರೆ.

ಸಂಜೆ 6 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅನಂತಪಥ ಮಾಸ ಪತ್ರಿಕೆಯ ಬಿಡುಗಡೆ, 63 ದೇವಸ್ಥಾನಗಳ ಸಮಗ್ರ ಮಾಹಿತಿಯನ್ನು ಒಳಗೊಂಡಿರುವಂತಹ “ದೇಗುಲ ದರ್ಶನ” ಪುಸ್ತಕ ಲೋಕಾರ್ಪಣೆ ಹಾಗೂ ಸಾಧಕರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ ರವಿಯವರು, ಸಚಿವರಾದ ಅಶ್ವಥ್‌ ನಾರಾಯಣ, ಸೋಮಣ್ಣ, ಆರ್‌. ಅಶೋಕ, ಗೊವಿಂದ ಕಾರಜೋಳ ಸೇರಿದಂತೆ ಸಚಿವರು, ನಗರ ಹಾಗೂ ರಾಜ್ಯದ ಹಲವರು ವಿಧಾನಸಭಾ ಕ್ಷೇತ್ರಗಳ ಶಾಸಕರುಗಳು ಮತ್ತು ಬಿಜೆಪಿ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ.

ಈ ಎರಡೂ ದಿನಗಳ ಕಾರ್ಯಕ್ರಮ ಕೆ.ಆರ್‌ ರಸ್ತೆ, ಶಂಕರಪುರಂನಲ್ಲಿರುವ ಜೈನ್‌ ಭವನ (ಗಾಯನ ಸಮಾಜದ ಹತ್ತಿರ) ದಲ್ಲಿ ನಡೆಯಲಿದೆ ಎಂದು ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ. ತೇಜಸ್ವಿನಿ ಅನಂತಕುಮಾರ್‌ ಹಾಗೂ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಪಿ.ವಿ. ಕೃಷ್ಣ ಭಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2022 08:09 pm

Cinque Terre

884

Cinque Terre

0

ಸಂಬಂಧಿತ ಸುದ್ದಿ