ರಾಜ್ಯದಲ್ಲಿ ರಾತ್ರೋರಾತ್ರಿ ಪಿಎಫ್ ಐ ಕಾರ್ಯಕರ್ತರ ಮೇಲಿನ ದಾಳಿ ಪ್ರಕರಣಕ್ಕೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿದ್ದು, ಕಳೆದ ವಾರ ಪಿಎಫ್ಐ ಮುಖಂಡರ ಮೇಲೆ ಎನ್ ಐಎ ದಾಳಿ ನಡೆಸಿತ್ತು.ಇಂದು ಬೆಳಗ್ಗೆ 3 ಗಂಟೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.ಸುಮಾರು 80 ಜನರನ್ನು ವಶಕ್ಕೆ ಪಡೆದುಕೊಂಡಿದ್ದು, ವಶಕ್ಕೆ ಪಡೆದುಕೊಂಡ ಆರೋಪಿಗಳನ್ನು ಮುಂಜಾಗ್ರತ ಕ್ರಮವಾಗಿ ಆಯಾ ತಾಲೂಕು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಬಾಂಡ್ ಓವರ್ ಮಾಡಿಸಿಲಾಗುವುದು.
ಜೊತೆಗೆ ಕಾನೂನು ಸುವ್ಯವಸ್ಥೆ ಧಕ್ಕೆ, ಕೋಮುಸೌಹಾರ್ಧಕ್ಕೆ ಹಾನಿಯಾಗದಂತೆ ಮುಂಜಾಗ್ರತ ಕ್ರಮವಾಗಿ ಈ ದಾಳಿ ನಡೆಸಲಾಗಿದೆ.ವಶಕ್ಕೆ ಪಡೆದುಕೊಂಡ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು.
ಸೆಕ್ಷನ್ 107 ರಡಿ ಮುಚ್ಚಳಿಕೆ ಬರೆಸಿ ಅಹಿತಕರ ಘಟನೆಯಲ್ಲಿ ಭಾಗಿಯಾಗಕೂಡದು, ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಬಾಂಡ್ ನಲ್ಲಿ ಬರೆಸಿಲು ಪೊಲೀಸ್ರು ತಯಾರಿ ನಡೆಸಿದ್ದಾರೆ.
PublicNext
27/09/2022 05:20 pm