ಪಿಎಫ್ಐ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ಆದೇಶವು ಕೈ ಸೇರಿದ್ದು, ಸೂಕ್ತ ಬಂದೋಬಸ್ತ್‌ಗೆ ಸೂಚನೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆದೇಶ ಈಗಾಗಲೇ ನಮ್ಮ ಕೈ ಸೇರಿವೆ. ಅದರ ಆಧಾರದ ಮೇಲೆ ರಾಜ್ಯ ಸರ್ಕಾರವು ಪೂರಕ ಆದೇಶ ಹೊರಡಿಸುತ್ತದೆ. ಇದಕ್ಕೆ ಪೂರಕವಾಗಿ ನಾವು ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಆದೇಶದ ಹಿನ್ನೆಲೆ ನಾವು ಸೂಕ್ತ ಬಂದೋಬಸ್ತ್ ಮಾಡಿಕೊಂಡಿದ್ದು, ನಮ್ಮ ಠಾಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳು ವಿವಿಧ ಸಂಘಟನೆಗಳ ಜೊತೆ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರದ ಆದೇಶ ಪಾಲನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
PublicNext
28/09/2022 12:59 pm