ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 13.25 ಕೋಟಿ ರೂ.ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ; ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಶಿವಣ್ಣ

ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 13.25 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯನ್ನು ಶಾಸಕ ಬಿ.ಶಿವಣ್ಣ ಮತ್ತು ಪುರಸಭಾ ಅಧ್ಯಕ್ಷ ಎನ್.ಎಸ್.ಪದ್ಮನಾಭ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಶಾಸಕ ಬಿ.ಶಿವಣ್ಣ ಮಾತನಾಡಿ ಆನೇಕಲ್‌ನಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂಬುದು ನಮ್ಮ ಕನಸಾಗಿತ್ತು. ಈ ನಿಟ್ಟಿನಲ್ಲಿ 13.25ಕೋಟಿ ಅನುದಾನ ಮಂಜೂರು ಮಾಡಿಸಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಡಿಸೆಂಬರ್ ಒಳಗಡೆ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಭವನದಲ್ಲಿ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಲಿಫ್ಟ್ ವ್ಯವಸ್ಥೆ, ಹವಾನಿಯಂತ್ರಣ, ಧ್ವನಿ, ಬೆಳಕು, ಆಸನ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳಿಗಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಪುರಸಭಾ ಅಧ್ಯಕ್ಷ ಎನ್.ಎಸ್.ಪದ್ಮನಾಭ ಮಾತನಾಡಿ ಆನೇಕಲ್‌ನಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿರುವುದು ತಾಲ್ಲೂಕಿನ ಜನತೆಗೆ ಉತ್ತಮ ಕೊಡುಗೆಯಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಗ್ರಂಥಾಲಯ ಸೇರಿದಂತೆ ಉತ್ತಮ ಸೌಲಭ್ಯಗಳು ದೊರೆಯುವಂತೆ ನಿರ್ಮಾಣ ಮಾಡಿರುವುದು ತಾಲ್ಲೂಕಿಗೆ ವರದಾನವಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಮತ್ತು ಸಂಸದರ ಪ್ರಯತ್ನ ಶ್ಲಾಘನೀಯ ಎಂದರು.

Edited By :
PublicNext

PublicNext

29/09/2022 03:51 pm

Cinque Terre

27.88 K

Cinque Terre

0

ಸಂಬಂಧಿತ ಸುದ್ದಿ