ಸರಕು ಸಾಗಣೆ ಲಾರಿಗಳ ಬಳಿ ಅಧಿಕ ಹಣ ಪಡೆಯುತ್ತಿದ್ದ ಭ್ರಷ್ಟ ಅಧಿಕಾರಿಗಳನ್ನು ಮಟ್ಟ ಹಾಕಲು ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಿಗೆ ಅತ್ತಿಬೆಲೆ ಆರ್‌ಟಿಓ ಕಚೇರಿ ಬಳಿ ನಡೆದಿದೆ.
ಈ ದಾಳಿಯಲ್ಲಿ 5 ಲಕ್ಷ ರೂ. ಹಾಗೂ ಇಬ್ಬರು ಆರ್‌ಟಿಓ ಅಧಿಕಾರಿಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. ಇನ್ನು ಇತ್ತೀಚಿಗೆ ಅತ್ತಿಬೆಲೆ ಆರ್‌ಟಿಓ ಅಧಿಕಾರಿಗಳು ಭ್ರಷ್ಟಾಚಾರ ಆರೋಪದಡಿಯಲ್ಲಿ ಲೋಕಾಯುಕ್ತ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗ್ತಿದೆ ಅಂತ ಮಾಹಿತಿ ಲಭ್ಯವಾಗಿದೆ.
ತಮಿಳುನಾಡು, ಕೇರಳ, ಮಹಾರಾಷ್ಟ್ರ ಮೂಲದ ಲಾರಿಗಳಿಂದ ಹಣ ಪಡೆಯುತ್ತಿದ್ದ ಬಗ್ಗೆಯೂ ಆರೋಪ ಕೇಳಿಬಂದಿದೆ. ಲೋಕಾಯುಕ್ತ ಅಧಿಕಾರಿಗಳು ಆರ್‌ಟಿಓ ಕಚೇರಿಯಲ್ಲಿರುವ ಹಲವು ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.
PublicNext
30/09/2022 03:26 pm