ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ವಾಲ್ಮಿಕಿ ಪ್ರಸನ್ನಾನಂದ ಸ್ವಾಮಿ ಧರಣಿ ಸತ್ಯಾಗ್ರಹ ಕೈ ಬಿಟ್ಟಿದ್ದಾರೆ. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪ್ರಸನ್ನಾನಂದ ಸ್ವಾಮೀಜಿ, '151 ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಟ್ಟಿದ್ದಾರೆ. ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಕ್ಕೆ ಸಿಎಂಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಚಿವರು, ಶಾಸಕರು, ಎಸ್ಸಿ, ಎಸ್ಟಿ ಮಠಾಧೀಶರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಾಳೆ ಮಹರ್ಷಿ ವಾಲ್ಮೀಕಿ ಜಯಂತಿ ಇದೆ. ಧರಣಿ ಸತ್ಯಾಗ್ರಹ ಇಂದಿಗೆ ಅಂತ್ಯಗೊಳಿಸುತ್ತೇವೆ. ನಾಳೆಯ ಜಯಂತಿಯನ್ನು ವಿಜಯೋತ್ಸವವಾಗಿ ಆಚರಿಸುತ್ತೇವೆ' ಎಂದರು.
Kshetra Samachara
08/10/2022 04:52 pm