ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಯುವಕನ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಸಾವಿನ ನಂತರವೂ ಸಾರ್ಥಕತೆ ಮೆರೆದ ಯುವಕ 3 ಜನರಿಗೆ ಜೀವದಾನ ಮಾಡಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟದ ಯುವಕ ಕೀರ್ತಿ (24) ತನ್ನ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ. ವಾರದ ಹಿಂದೆ ವಿಜಯಪುರದಲ್ಲಿರುವ ತನ್ನ ಅಕ್ಕನ ಮನೆಗೆ ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಾಗೊಂಡಿದ್ದ ಕೀರ್ತಿಗೆ ನವಚೇತನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾದಲ್ಲಿದ್ದ ಕೀರ್ತಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ನಿನ್ನೆ ಮೆದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ವೈದ್ಯರು ಘೋಷಣೆ ಮಾಡಿದ್ದಾರೆ.
ಮಗನ ಸಾವಿನ ದುಃಖದಲ್ಲೂ ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಲು ತೀರ್ಮಾನಿಸಿದ್ರು. ಮೃತ ಕೀರ್ತಿಯ ದೇಹದಿಂದ ಕಿಡ್ನಿ, ಹೃದಯ ಮತ್ತು ಕಣ್ಣುಗಳನ್ನ ದಾನ ಮಾಡಲಾಗಿದೆ. ಈ ಮೂಲಕ ಮೂವರ ಬದುಕಿಗೆ ಕೀರ್ತಿ ಬೆಳಕಾಗಿದ್ದಾನೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕೀರ್ತಿ ಸ್ನೇಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
PublicNext
20/09/2022 03:12 pm