ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಾಗಿರುವ ಸುಮಾರು 20 ಸಾವಿರ ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ಆಯೋಗ (ಎಸ್ ಎಸ್ ಸಿ) ನಡೆಸುವ ಪರೀಕ್ಷೆಗಳಲ್ಲಿ 'ಹಿಂದಿ ಮತ್ತು ಇಂಗ್ಲೀಷ್'ನಲ್ಲಿ ಮಾತ್ರ ಉತ್ತರ ಬರೆಯಲು ಅವಕಾಶ ನೀಡಲಾಗಿದೆ.
ಕನ್ನಡ ಮಾಧ್ಯಮದಲ್ಲಿ 'ಪದವಿ ಶಿಕ್ಷಣ' ಪಡೆದಿರುವ ಕರ್ನಾಟಕದ ಲಕ್ಷಾಂತರ ನಿರುದ್ಯೋಗಿ ಯುವಕ-ಯುವತಿಯರು ಕೇಂದ್ರ ಸರ್ಕಾರದ ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.
ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತದಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಹಿಂದಿ ಭಾಷಿಕರಿಗೆ ಮೀಸಲಿಟ್ಟಂತೆ ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆಯಲು ಹಿಂದಿ ಮಾಧ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುವವರು ಸುಲಭವಾಗಿ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಪಡೆಯಲಿದ್ದಾರೆ. ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆಯನ್ನು ನಡೆಸಲಾಗಿದೆ.
PublicNext
13/10/2022 03:33 pm