ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದು, ರಾಜಕಾಲುವೆಗಳ ಒತ್ತುವರಿ ಮಾಡಿಕೊಂಡಿರುವವರು ತಾವೇ ತೆರವು ಮಾಡಲು ಅನುವು ಮಾಡಿಕೊಡಿ ಎಂದು ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದ್ದಾರೆ.
ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿಯ ಖಾಸಗೀ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಮಳೆಯಿಂದಾಗಿ ತೊಂದರೆಗೊಳಗಾದ ನಿರಾಶ್ರಿತರಿಗೆ ಪರಿಹಾರದ ಪ್ರಮಾಣ ವಿತರಿಸಿ ಮಾತನಾಡಿದರು. 712 ಮನೆಗಳಿಗೆ ನೀರು ನುಗ್ಗಿದ್ದು, ಹಾಗೂ ಮಳೆಯಿಂದಾಗಿ 20 ಮನೆಗಳು ಸಂಪೂರ್ಣ ಬಿದ್ದಿವೆ ಎಂದರು.
ನೀರು ನುಗ್ಗಿದ ಮನೆಗಳ ಮಾಲೀಕರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರು. ರಾಜಕಾಲುವೆಗಳ ಒತ್ತುವರಿ ಮನೆಗಳನ್ನು ಬಿಬಿಎಂಪಿ ಅಧಿಕಾರಿಗಳು ಗುರುತ್ತಿಸಿದ್ದು, ತೆರವು ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದರು.
PublicNext
13/09/2022 06:25 pm