ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೆರಿಷಬಲ್ ಸರಕು ಸಾಗಣೆ- ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಮೊದಲ ಸ್ಥಾನ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸತತ ಎರಡನೇ ಬಾರಿಗೆ ಪೆರಿಷಬಲ್ ಸರಕು ಸಾಗಣೆ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.

ಕಳೆದ ವರ್ಷದಲ್ಲಿ 48,130 ಟನ್‌ ಸಾಗಣೆ ಮಾಡುವ ಮೂಲಕ ಮೊದಲ ಸ್ಥಾನದಲ್ಲಿತ್ತು. 2021-22ರ ಹಣಕಾಸು ವರ್ಷದಲ್ಲಿ 52,366 ಮೆಟ್ರಿಕ್‌ ಟನ್‌ನಷ್ಟು ಬೇಗ ಕ್ಷಯಿಸಬಲ್ಲ ಹಣ್ಣು, ತರಕಾರಿ, ಹೂವಿನಂತಹ ಪೆರಿಷಬಲ್ ಸರಕು ಸಾಗಣೆ ಮಾಡುವ ಮೂಲಕ ಬೆಂಗಳೂರು ಮತ್ತೊಮ್ಮೆ ಮೊದಲ ಸ್ಥಾನ ಪಡೆದುಕೊಂಡಿದೆ.

ಪ್ರತಿದಿನ ಬೆಂಗಳೂರಿನಿಂದ 33 ಸರಕು ಸಾಗಣೆ ವಿಮಾನ ಲಂಡನ್‌, ಸಿಂಗಾಪುರ ಸೇರಿದಂತೆ ಒಟ್ಟು 48 ದೇಶಗಳಿಗೆ ರಫ್ತು ಮಾಡುತ್ತಿವೆ. ದಕ್ಷಿಣ ಭಾರತದಿಂದಲೇ ಒಟ್ಟು ಶೇ.41ರಷ್ಟು ಪ್ರಮಾಣದಲ್ಲಿ ಪೆರಷಬಲ್ ಸರಕನ್ನು ರಫ್ತು ಮಾಡಲಾಗಿದೆ. ಅದರಲ್ಲಿ 36,493 ಮೆಟ್ರಿಜ್ ಟನ್ ಪೌಲ್ಟ್ರಿ ಹಾಗೂ 1,952 ಮೆಟ್ರಿಕ್ ಟನ್ ಹೂಗಳನ್ನು ರಫ್ತು ಮಾಡಲಾಗಿದೆ ಎಂದು ಬಿಐಎಎ ಮುಖ್ಯ ಡೆವಲಪರ್‌ ಆಫೀಸರ್ ಸತ್ಯಕಿ ರಘುನಾಥ್ ತಿಳಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆಯನ್ನು ಇನ್ನಷ್ಟು ಸುಲಭಗೊಳಿಸಲು ಏರ್‌ಪೋರ್ಟ್‌ ಕಾರ್ಗೋ ಕಮ್ಯುನಿಟಿ ಸಿಸ್ಟಂ (CCS) ನನ್ನು ಅಳವಡಿಸಿದೆ. ಇದು ಸರಕನ್ನು ಪತ್ತೆ ಮಾಡಲು ಸಹಾಯ ಮಾಡಲಿದ್ದು, ಅನವಶ್ಯಕ ಚೆಕ್ಕಿಂಗ್‌ ಇರುವುದಿಲ್ಲ. ಕೃಷಿ ಸಂಸ್ಕೃರಿಸಿದ ಆಹಾರ ಉತ್ಪನ್ನ ರಫ್ತು ಅಭಿವೃದ್ಧಿ ಪ್ರಾಧಿಕಾರ, ಇಂಡಿಯನ್‌ ಕಸ್ಟಮ್ಸ್, ಪ್ಲಾಂಟ್ ಕ್ವಾರೆಂಟೈನ್‌ ಆಫೀಸ್‌ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದಿಂದ ಇಂದು ಬಿಐಎ ಸರಕು ಸಾಗಾಣೆಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಶ್ಲಾಘಿಸಿದರು.

ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ಮಾತನಾಡಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಯಲ್ಲಿ ಕೃಷಿ ಉತ್ಪನ್ನಗಳ ಸಾಗಣೆ ದೊಡ್ಡಮಟ್ಟದಲ್ಲಿ ಸಾಧನೆ ಮಾಡಿರುವುದು ದೇಶಕ್ಕೆ ಕೀರ್ತಿ ತಂದಿದೆ ಎಂದರು. ಪ್ರಸ್ತುತ ಬಿಐಎನಲ್ಲಿ 60 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಸರಕು ಸಂಗ್ರಹಿಸೊ ಸಾಮರ್ಥ್ಯ ಹೊಂದಿದೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸುವ ಇಂಗಿತ ಹೊಂದಿದೆ..

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ

Edited By : Vijay Kumar
PublicNext

PublicNext

30/09/2022 10:09 am

Cinque Terre

15.59 K

Cinque Terre

0

ಸಂಬಂಧಿತ ಸುದ್ದಿ