ಬೆಂಗಳೂರು: ಬೆಂಗಳೂರು ನಗರದ ಐದು ರೈಲು ನಿಲ್ದಾಣಗಳಲ್ಲಿ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ತಾತ್ಕಾಲಿಕವಾಗಿ ಹೆಚ್ಚಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೃಷ್ಣ ರಾಜಪುರ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ರೈಲು ನಿಲ್ದಾಣದಲ್ಲಿ 10 ರೂ.ಇದ್ದ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ರೂ.20 ಕ್ಕೆ ಹೆಚ್ಚಿಸಲಾಗಿದೆ. ದಸರಾ ಹಬ್ಬದ ರಜೆ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾದರೆ ಪ್ರಯಾಣಿಕರ ಓಡಾಟಕ್ಕೆ ಕಷ್ಟವಾಗಲಿದೆ ಎಂದು ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ನೈರುತ್ಯ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
Kshetra Samachara
02/10/2022 05:57 pm