ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 52 ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ..!

ಬೆಂಗಳೂರು: ಜಿಲ್ಲೆಯ ತಾಂಡಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಒಟ್ಟಾರೆ 52 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ವ್ಯಕ್ತಿಗಳಿಗೆ, ಸ್ವ ಸಹಾಯ ಸಂಘಗಳು ಅಥವಾ ಸಂಘ-ಸಂಸ್ಥೆಗಳಿಂದ ಹಾವೇರಿಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅರ್ಜಿ ಆಹ್ವಾನಿಸಿದೆ.

ಸರ್ಕಾರದ ಆದೇಶದಂತೆ ಎಲ್ಲ ಹಾಡಿ, ತಾಂಡಾಗಳು, ಗೊಲ್ಲರ ಹಟ್ಟಿಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ವಾಸವಾಗಿರುವ ಪಡಿತರ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಕನಿಷ್ಠ 100 ಪಡಿತರ ಚೀಟಿಗಳಿಗೆ ಸೀಮಿತಗೊಳಿಸಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕು ತಹಶೀಲ್ದಾರ ಶಿಫಾರಸ್ಸಿನ ಅನ್ವಯ ಜಿಲ್ಲೆಯ 52 ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಉದ್ದೇಶಿಸಿದ್ದು ಅರ್ಹರಿಂದ ಅರ್ಜಿ ಸಲ್ಲಿಕೆಗೆ ಆಹ್ವಾನಿಸಿದೆ.

Edited By : PublicNext Desk
Kshetra Samachara

Kshetra Samachara

04/10/2022 08:48 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ