ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವರ್ಷದೊಳಗೆ ಸಬ್‌ ಅರ್ಬನ್‌ ರೈಲು ಯೋಜನೆ ಪೂರ್ಣ: ಸೋಮಣ್ಣ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಉಪನಗರ ರೈಲು ಯೋಜನೆಯನ್ನು 2026ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಬೈಯಪ್ಪನಹಳ್ಳಿ-ಚಿಕ್ಕಬಾಣಾವರ (ಕಾರಿಡಾರ್‌-2) ಮಾರ್ಗದ ಸಿವಿಲ್‌ ಕಾಮಗಾರಿಯನ್ನು ಮಾರ್ಚ್‌ ಅಂತ್ಯದಿಂದ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ವಸತಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದ್ದು, ಯೋಜನೆಯ ಅಂದಾಜು ವೆಚ್ಚ 15,767 ಕೋಟಿ ರು. ಗಳಾಗಿದ್ದು, ಯೋಜನೆಯಲ್ಲಿನ 12,396 ಕೋಟಿ ರು.ಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2,479 ಕೋಟಿ ರು., 7438 ಕೋಟಿ ರು.ಗಳನ್ನು ಬಾಹ್ಯಸಾಲ ಹಾಗೂ ಉಳಿದ 3,371 ಕೋಟಿ ರು.ಗಳನ್ನು ಜಿಎಸ್‌ಟಿ ಹೊಂದಾಣಿಕೆ ಮತ್ತು ಇತರ ಮೂಲಗಳಿಂದ ಒದಗಿಸಲಾಗುವುದು. 148.17 ಕಿ.ಮೀ. ಉದ್ದದ ರೈಲ್ವೆ ಜಾಲವನ್ನು ರಾಜ್ಯ ಸರ್ಕಾರ ಹಾಗೂ ರೈಲ್ವೆ ಮಂತ್ರಾಲಯದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ಕೆ-ರೈಡ್‌ ಮೂಲಕ ಕಾರ್ಯಗತಗೊಳಿಸಲಾಗುವುದು ಎಂದರು.

ಇದಕ್ಕೂ ಮುನ್ನ ಮಾತನಾಡಿದ ಯು.ಬಿ. ವೆಂಕಟೇಶ್‌, ಯೋಜನೆಗೆ ಅನುಮತಿ ನೀಡಿ 500 ದಿನಗಳ ಮೇಲಾದರೂ ಈವರೆಗೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿಲ್ಲ. ಹೀಗಾದರೆ ಯಾವಾಗ ಯೋಜನೆ ಜಾರಿಯಾಗುವುದು ಹೇಗೆ, ಈ ಯೋಜನೆ ಜಾರಿಯ ಬಗ್ಗೆ ಯಾಕೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

04/10/2022 09:23 pm

Cinque Terre

1.31 K

Cinque Terre

2

ಸಂಬಂಧಿತ ಸುದ್ದಿ