ನೆಲಮಂಗಲ: ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು KSRTC ಬಸ್‌ಗಳನ್ನೆ ಅವಲಂಬಿಸಿದ್ದಾರೆ. ಆದರೆ ಈ ಬಸ್‌ಗಳು ಮಾತ್ರ ಸರಿಯಾದ ಸಮಯಕ್ಕೆ ಬರದೇ, ಬಂದರು ಸರಿಯಾಗಿ ನಿಲ್ಲಿಸದೇ ಇರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದ್ದು, ಸೋಂಪುರ ಹೋಬಳಿ, ನರಸೀಪುರ ಗ್ರಾಮದಲ್ಲಿ ಕರುನಾಡ ವಿಜಯ ಸೇನೆ ಹೋಬಳಿ ಮಟ್ಟದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇತ್ತೀಚಿಗೆ ಈ ಭಾಗದಲ್ಲಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ಹಾಜರಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಚಾಲಕರು ಹಾಗೂ ನಿರ್ವಾಹಕರು ವಿದ್ಯಾರ್ಥಿಗಳ ಮೇಲೆ ದರ್ಬಾರ್ ನಡೆಸುವ ಘಟನೆಗಳು ನಡೆಯುತ್ತಿದ್ದು, ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಧುಗಿರಿ ರಸ್ತೆಯಲ್ಲಿರುವ ನರಸೀಪುರ ಗ್ರಾಮದ ಬಳಿ ನೂರಾರು ವಿದ್ಯಾರ್ಥಿಗಳು ರಸ್ತೆಗಳಿದು ರಾಜ್ಯ ಹೆದ್ದಾರಿಯಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
-ಸುಮಿತ್ರ, ಪಬ್ಲಿಕ್ ನೆಕ್ಸ್ಟ್ ,ನೆಲಮಂಗಲ
PublicNext
13/09/2022 10:49 am