ದೇವನಹಳ್ಳಿ: 2022ರ ನವೆಂಬರ್ ಹತ್ತಕ್ಕೆ 108 ಅಡಿಗಳ ಕೆಂಪೇಗೌಡ ಪ್ರತಿಮೆ ಅನಾವರಣ ಮತ್ತು ಕೆಂಪೇಗೌಡ ಇಂಟರ್ನ್ಯಾಷನಲ್ ಏರ್‌ಪೋರ್ಟ್ ಟರ್ಮಿನಲ್ 2 ಲೋಕಾರ್ಪಣೆ ಆಗಲಿದೆ. ಈ ನಿಟ್ಟಿನಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ಥ ನಾರಾಯಣ್ ರವರು ಏರ್‌ಪೋರ್ಟ್ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದರು.
ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಪ್ರತಿಮೆ ಹಾಗೂ ಟರ್ಮಿನಲ್-2ನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿಯವರ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಇರುವ ಹಿನ್ನೆಲೆ ಸಚಿವ ಅಶ್ವತ್ಥ ನಾರಾಯಣ ಅಧಿಕಾರ ಜೊತೆ ಸ್ಥಳ ಪರಿಶೀಲನೆ ನಡೆಸಿದರು. ಕೆಂಪೇಗೌಡರ ಪ್ರತಿಮೆ ಸಮೀಪದ 25ಎಕರೆ ಖಾಲಿ ಜಾಗದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.
ಮೋದಿ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆ ಜನ ಬರಲಿದ್ದು, ಸೂಕ್ತ ಬಂದೋಬಸ್ತ್ ಮತ್ತು ವಾಹನನಿಲುಗಡೆ ಸೇರಿದಂತೆ ಸಕಲ ವ್ಯವಸ್ಥೆ ಮಾಡಲಾಗುತ್ತದೆ. ನಗರದಲ್ಲಿ ಬೇರೆ ಯಾವುದೇ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಲು ಸಂಚಾರ ನಿಯಮಗಳ ಕುರಿತು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದರು.
PublicNext
10/10/2022 05:11 pm