ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ. 2-4ರವರೆಗೆ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ

ಬೆಂಗಳೂರು: ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್‌ ನಿರಾಣಿ ನೇತೃತ್ವದ ನಿಯೋಗ ಫ್ರಾನ್ಸ್‌ನ ಪ್ಯಾರಿಸ್ ನಗರದಲ್ಲಿ ಸೋಮವಾರ ಅಲಸ್ಟಾಮ್ ಇಂಜಿನಿಯರಿಂಗ್ ಕಂಪನಿಯ ಉಪಾಧ್ಯಕ್ಷ ಫ್ಯೂರಿ ಪಿಯರ್‌ ಅವರನ್ನು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚಿಸಲಾಯಿತು. ಹಾಗೂ, ನವೆಂಬರ್‌ 2-4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಔಪಚಾರಿಕ ಆಹ್ವಾನ ನೀಡಲಾಯಿತು.

ಅಲಸ್ಟಾಮ್ ಇಂಜನಿಯರಿಂಗ್ ಕಂಪನಿಯು ಫ್ರಾನ್ಸ್‌ನಲ್ಲಿ ಚಲನಶೀಲತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಫ್ರಾನ್ಸ್‌ನಾದ್ಯಂತ 16 ಸೈಟ್‌ಗಳೊಂದಿಗೆ, ಸ್ಥಳೀಯ ಆರ್ಥಿಕತೆಯ ಚೈತನ್ಯಕ್ಕೆ Alstom ಕೊಡುಗೆ ನೀಡುತ್ತಿದೆ. ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ ಶೋ ಭಾಗವಾಗಿ ಬೃಹತ್ ಮತ್ತು‌ ಮಧ್ಯಮ‌ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ನೇತೃತ್ವದ ನಿಯೋಗ 7 ದಿನಗಳ ಯೂರೋಪ್‌ ಪ್ರವಾಸ ಕೈಗೊಂಡಿದೆ.

ನಿಯೋಗವು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಅವರನ್ನೊಳಗೊಂಡಿದೆ.

Edited By : PublicNext Desk
PublicNext

PublicNext

03/10/2022 06:17 pm

Cinque Terre

2.01 K

Cinque Terre

0