ಬೆಂಗಳೂರು: ಫ್ರಾನ್ಸ್‌ನ ಪ್ಯಾರಿಸ್ ನಗರದಲ್ಲಿ ಮಂಗಳವಾರ ಏರಬಸ್ ಕಂಪನಿ ಉಪಾಧ್ಯಕ್ಷ ಡಾ. ಲೀ ಲಂಡನ್ ಹಾಗೂ ಏರಬಸ್ ದಕ್ಷಿಣ ಏಷಿಯಾ ನಿರ್ದೇಶಕ ಕುಮಾರ್ ಉತ್ತಮ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ನೇತೃತ್ವದ ನಿಯೋಗ ಭೇಟಿ ಮಾಡಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಕುರಿತು ಚರ್ಚೆಯನ್ನು ಮಾಡಿದರು.
ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ ಶೋ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ನೇತೃತ್ವದ ನಿಯೋಗ 7 ದಿನಗಳ ಯೂರೋಪ್ ಪ್ರವಾಸ ಕೈಗೊಂಡಿದೆ.
ನಿಯೋಗವು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರನ್ನೊಳಗೊಂಡಿದೆ.
Kshetra Samachara
04/10/2022 09:52 pm