ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣದಲ್ಲಿ ನಾಳೆ ( ಅ.9) ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸರು ಸಮುದಾಯಗಳ ಮುಖಂಡರ ಜೊತೆ ಶಾಂತಿಸಭೆ ನಡೆಸಿದರು. ಸಭೆಯಲ್ಲಿ ಹೊಸಕೋಟೆ ಡಿವೈಎಸ್ಪಿ ಉಮಾಶಂಕರ್, ಇನ್ಸ್ಪೆಕ್ಟರ್ ಮಂಜುನಾಥ್ ಜೊತೆಗೆ ಹಿಂದೂ ಸಂಘಟನೆ, ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಚರ್ಚೆಗೆ ಒಳಪಡಿಸಿದರು.
09-10-2022 ಭಾನುವಾರ ಹೊಸಕೋಟೆ ಪಟ್ಟಣದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ಈದ್ ಮಿಲಾದ್ ಹಬ್ಬದ ಮೆರವಣೆಗೆ ನಡೆಯಲಿದೆ. ಇನ್ನು ಸಂಜೆ ಏಳು ಗಂಟೆಗೆ ವೇದಿಕೆಯ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಹಾಗಾಗಿ ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹಾಗೆಯೇ ಈದ್ ಮಿಲಾದ್ ಹಬ್ಬವು ಸುಸೂತ್ರವಾಗಿ ನಡೆಯಲು ಸಹಕರಿಸಬೇಕು ಎಂದು ಹೊಸಕೋಟೆ ಪೊಲೀಸರು ಜನಪ್ರತಿನಿಧಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಹೊಸಕೋಟೆ.
Kshetra Samachara
08/10/2022 06:35 pm